ಗಾಂಧೀಜಿ ಸಿ ಮೊಳಕೇರೆ ಅವರು ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕೋನಮೇಳಕುಂದಾ ಗ್ರಾಮದವರು. (ಜನನ: 02-07-1977) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹುಟ್ಟೂರಿನಲ್ಲಿ ಮುಗಿಸಿ ಪದವಿ ಶ್ರೀ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯ ಭಾಲ್ಕಿಯಲ್ಲಿ ಪದವಿ ಪೂರ್ಣಗೊಳಿಸಿದರು.
ಬಿ ಇಡಿ ಮೈಸೂರು ವಿಶ್ವವಿದ್ಯಾಲಯದಿಂದ ಹಾಗೂ ಎಂ ಎ ಇತಿಹಾಸ , ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿಯ 2003ರಲ್ಲಿ ಪಡೆದರು. ಪಿ.ಎಚ್.ಡಿ 2007ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿಯಿಂದ ಪಡೆದರು. ಪಿ.ಡಿ.ಎಫ್ ಯುಜಿಸಿಯಿಂದ ಪಡೆದರು. ಪ್ರಸ್ತುತ ಕಲಬುರಗಿಯ ಡಾ ಅಂಬೇಡ್ಕರ ಪದವಿ ಮಹಾವಿದ್ಯಾಲಯಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೀದರ ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿ ಹಾಗೂ ಹೈದ್ರಾಬಾದ್ ಕರ್ನಾಟಕ ಐತಿಹಾಸಿಕ ಕಥನ ಎಂಬ ಕೃತಿಗಳನ್ನು ರಚಿಸಿದ್ದಾರೆ.