About the Author

ಗಣೇಶ್‌ರಾವ್ ನಾಡಿಗೇರ್ ಆಪ್ತ ಸಮಾಲೋಚನೆ - ಮನೋ ಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವೀಧರರು. ‘ಮಾನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿ  ಹಾಗೂ ದೂರದರ್ಶನದಲ್ಲಿ ಭಾಷಣ, ಸಂದರ್ಶನಗಳು ಪ್ರಸಾರವಾಗಿವೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟ ಸಮ್ಮೇಳನ - ಕಾರ್ಯಾಗಾರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. 2010 ರಿಂದ ಶಿವಮೊಗ್ಗೆಯ ಮಾನಸ -ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಹಿರಿಯ ಆಪ್ತ ಸಮಾಲೋಚಕರಾಗಿ ಕೆಲಸ ಮಾಡುತ್ತಿದ್ದಾರೆ.

ಇವರ ಪ್ರಮುಖ ಕೃತಿಗಳೆಂದರೆ ಮನದೊಳಗಿನ ಮಾತು, ಮಾನಸಿಕ ಅಸ್ವಸ್ಥರ ಪುನಶ್ವೇತನ ಹೇಗೆ? ಏಕೆ? ಮುಂತಾದವು. 

ಗಣೇಶ್‌ರಾವ್ ನಾಡಿಗೇರ್