ಲೇಖಕಿ ಗಿರಿಜಾ ಎಸ್. ದೇಶಪಾಂಡೆ ಅವರು ಮೂಲತಃ ಧಾರವಾಡ ಜಿಲ್ಲೆಯ ಶಿಗ್ಗಾವಿ ಊರಿನವರು. ಹಾವೇರಿಯಲ್ಲಿ ಬಿ.ಎ. ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಹಾಗೂ ಬಿ.ಇಡಿ ಪದವೀಧರೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಈಗ ನಿವೃತ್ತರು. ಇವರು ಬರೆದ ಲೇಖನಗಳು, ಸಂದರ್ಶನಗಳು, ಪ್ರಬಂಧಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಬೆಂಗಳೂರಿನಲ್ಲಿ ವಾಸವಿದ್ದಾರೆ. ಕರ್ನಾಟಕ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸದಸ್ಯರಾಗಿದ್ದಾರೆ.
ಪ್ರಶಸ್ತಿ-ಪುರಸ್ಕಾರಗಳು: ಡಿ.ಎಸ್.ಮ್ಯಾಕ್ಸ್ ಕನಸ್ಟ್ರಕ್ಶನ್ (2019) ಕಂಪನಿಯವರಿಂದ ರಾಜ್ಯೋತ್ಸವದಂದು ಶ್ರೇಷ್ಟ ಅಂಕಣ ಬರಹಗಾರ್ತಿ ಸಾಹಿತ್ಯಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನಿಂದ (2020) ಕನ್ನಡ ಸೇವಾರತ್ನ ಪ್ರಶಸ್ತಿ, ಲಲಿತಾ ಪ್ರಶಸ್ತಿ, ಕನ್ನಡ ಶಿಕ್ಷಕಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಕನ್ನಡ ರತ್ನ ಬಿರುದು ಲಭಿಸಿದೆ.