ಲೇಖಕರು ಹಾಗೂ ಸಾಹಿತಿ ಶ್ರೀ ಗುರುಲಿಂಗ ಶಿವಾಚಾರ್ಯರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾoವದವರು ತಂದೆ ಚೆನ್ನಯ್ಯ ತಾಯಿ ಕಲ್ಯಾಣಮ್ಮ. ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ (ತತ್ವಶಾಸ್ತ್ರ) ದಲ್ಲಿ ಸ್ನಾತಕೋತ್ತರ ಪದವಿ ನಂತರ 1980 ರಲ್ಲಿ ಮಹಾಗಾಂವ ಕಳ್ಳಿಮಠದ ಪೀಠಾಧಿಪತಿಗಳಾಗಿ ಅಧಿಕಾರ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ‘ಕಳ್ಳಿಮಠದ ಕಲ್ಪತರು’ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಮಹಾಗಾಂವ್ ಕಳ್ಳಿಮಠ ಪ್ರಕಾಶನದಿಂದ ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ . ಶ್ರೀಯುತರಿಗೆ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ-ಪುರಸ್ಕಾರಗಳನ್ನು ನೀಡಿ ಗೌರವಿಸಿವೆ.
ಕೃತಿಗಳು: 'ಶೂನ್ಯದ ಒಡಲು'( ವಚನ ಸಂಕಲನ)' ಸೂಕ್ತಿ ಸುಧೆ 'ಹಾಗೂ 'ದೇಗುಲ'( ಕವನ ಸಂಕಲನ)