About the Author

ಕವಯತ್ರಿ, ಸ್ತ್ರೀವಾದಿ ಎಚ್.ಎಲ್. ಪುಷ್ಪ ಅವರು ದೊಡ್ಡಬಳ್ಳಾಪುರದ ಹೊಸಹಳ್ಳೀ ಉಜ್ಜನಿಯಲ್ಲಿ 1962 ಸೆಪ್ಟಂಬರ್‌ 18ರಂದು ಜನಿಸಿದರು. ತಾಯಿ ಕಮಲಮ್ಮ, ತಂದೆ ಲಕ್ಷ್ಮಣಗೌಡ. ಕನ್ನಡ ನಾಟಕಗಳಲ್ಲಿ ಮೈಮನಸ್ಸುಗಳ ಸಂಬಂಧ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಕವನ ರಚನೆಯಲ್ಲಿ ಅತೀವ ಆಸಕ್ತಿ ಇರುವ ಇವರು ಅಮೃತಮತಿ ಸ್ವಗತ ಕೃತಿಯ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದರು. 

ಪುಷ್ಪ ಅವರ ಪ್ರಮುಖ ಕೃತಿಗಳೆಂದರೆ ಅಮೃತಮತಿಯ ಸ್ವಗತ, ಗಾಜುಗೊಳ, ಮದರಂಗಿ, ವೃತ್ತಾಂತ, ಲೋಹದ ಕಣ್ಣು (ಕವನ ಸಂಕಲನ), ಭೂಮಿಲ್ಲ ಇವಳು, ಗೆಲ್ಲಲಾರ್ಕುಮೆ ಮೃತ್ಯುರಾಜನಂ, ಪರ್ವಾಪರ್ವ (ನಾಟಕ), ಅವಲೋಕನ, ಗಂಧಗಾಳಿ, ವಚನ ಸಾಹಿತ್ಯ ಮತ್ತು ಸ್ತ್ರೀತ್ವದ ಕಲ್ಪನೆ (ವಿಮರ್ಶೆ) ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ. 

ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಪು.ತಿ.ನ.ಕಾವ್ಯ ಪುರಸ್ಕಾರ, ಕಡೆಂಗೋಡ್ಲು ಶಂಕರಭಟ್‌ ಕಾವ್ಯ ಪ್ರಶಸ್ತಿ, ಸಾರಂಗಮಠ ಪಾಟೀಲ ಪ್ರಶಸ್ತಿ ಮುಂತಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಎಚ್.ಎಲ್. ಪುಷ್ಪ

(18 Sep 1962)

Awards

BY THE AUTHOR