ಎಚ್. ನಾಗವೇಣಿಯವರು ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ತಾಲ್ಲೂಕಿನ ಹೊನ್ನಕಟ್ಟೆಯಲ್ಲಿ 29-11-1962 ರಂದು ಜನಿಸಿದರು. ಕರಾವಳಿಯ ಸಾಂಸ್ಕೃತಿಕ ವಿಭಿನ್ನತೆಯ ಹಿನ್ನೆಲೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಪಲ್ಲಟಗಳನ್ನು ಶೋಧಿಸುವ ಉತ್ತಮ ಕಥೆಗಳನ್ನು ನೀಡುತ್ತ ಡಾ. ಎಚ್. ನಾಗವೇಣಿ ಸಾಹಿತ್ಯಲೋಕದ ಗಮನ ಸೆಳೆದಿದ್ದಾರೆ. ವಿಜ್ಞಾನ, ಗ್ರಂಥಾಲಯ ವಿಜ್ಞಾನ, ಸಾಹಿತ್ಯ ಮತ್ತು ಶಿಕ್ಷಣ ಇವೆಲ್ಲದರಲ್ಲಿ ಪದವಿಗಳನ್ನು ಪಡೆದಿರುವ ಅವರು, ಈಗ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಗ್ರಂಥಾಲಯದ ಮುಖ್ಯ ಗ್ರಂಥಪಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಕಟಿತ ಕೃತಿಗಳು- ನಾಲ್ಕನೇ ನೀರು, ಮೀಯುವ ಆಟ, ಕಡಲು, ವಸುಂಧರೆಯ ಗ್ಯಾನ, ಸೂರ್ಯನಿಗೊಂದು ವೀಳ್ಯ (ಕಥಾ ಸಂಕಲನಗಳು), ಗಾಂಧಿ ಬಂದ (ಕಾದಂಬರಿ), ಕೊಡಗಿನ ಗೌರಮ್ಮ ನವೋದಯದ ಕಥನಗಾರ್ತಿ ಗೌರಮ್ಮ, ರಂಗಸಂಪನ್ನ (ಜೀವನಚಿತ್ರಗಳು), ಸಾರ ವಿಸ್ತಾರ, ತಿಳಿರು ತೋರಣ (ವಿಮರ್ಶೆ) ಇತ್ಯಾದಿ