About the Author

ಲೇಖಕಿ, ಸಂಶೋಧಕಿ ಹನುಮಾಕ್ಷಿ ಗೋಗಿ ಇವರು 1955 ಜೂನ್ 1ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಬೈಚಬಾಳದಲ್ಲಿ ಜನಿಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದ ಇವರು ರಾಜ್ಯ ಸರ್ಕಾರದ ಸಹಕಾರ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಹುಬ್ಬಳ್ಳಿಯಲ್ಲಿ ನೆಲೆಸಿರುವ ಇವರು ಮಹಿಳಾ ಸಾಹಿತ್ಯಿಕಾ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. 

ಸಾಹಿತ್ಯಾಸಕ್ತರಾಗಿದ್ದ ಇವರು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ವ್ಯಾಸಾಂಗ, ಮುದ್ನೂರು ಮತ್ತು ಯಡ್ರಾಮಿ ಶಾಸನಗಳು, ಕಲಬುರ್ಗಿ ಜಿಲ್ಲೆಯ ಶಾಸನಗಳು, ಕರ್ನಾಟಕ ಭಾರತಿ ಸೂಚಿ, ಅನುಶಾಸನ, ಉಪ್ಪಾರ ಹಣತೆ, ಬೀದರ ಜಿಲ್ಲೆಯ ಶಾಸನಗಳು, ಕಾಳಮುಖ ಮತ್ತು ಪಾಶುಪತ ದೇವಾಲಯಗಳು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 

ಹನುಮಾಕ್ಷಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಬಹುಮಾನ, ರುಕ್ಮಿಣಿಬಾಯಿ ಸ್ಮಾರಕ ಪ್ರಶಸ್ತಿ, ದ.ರಾ.ಬೇಂದ್ರೆ ಪ್ರಶಸ್ತಿ ಮುಂತಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 

ಹನುಮಾಕ್ಷಿ ಗೋಗಿ

(01 Jun 1955)