ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ಗ್ರಾಮದವರಾದ ಐ.ಜೆ.ಮ್ಯಾಗೇರಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕಾರಾಗೃಹ ಇಲಾಖೆಯಲ್ಲಿ ಉಪ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಸಾಹತುಶಾಹಿ ಅನುಭವ ಮತ್ತು ಕನ್ನಡ ಕಾದಂಬರಿಗಳು ಇವರು ಬರೆದ ಪುಸ್ತಕ.