ಲೇಖಕ ಜಗದೀಶ.ಬ.ಹಾದಿಮನಿ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಳಮಳ್ಳಿ ಗ್ರಾಮದವರು. ತಂದೆ ಬಸವಂತರಾಯ. ತಾಯಿ - ಧನಪೂರ್ಣ. ಬಾಗಲಕೋಟೆ ಜಿಲ್ಲೆಯ ವಿಜಯ ಮಹಾಂತೇಶ ಪ್ರೌಢಶಾಲೆಯಲ್ಲಿ ಶಿಕ್ಷಣ, ಹುನಗುಂದದ ವ್ಹಿ.ಎಂ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವ್ಹಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪಿಯುಸಿ, ಹುನಗುಂದದ ಸರಕಾರಿ ಶಿಕ್ಷಕರ ತರಬೇತಿ ಕಾಲೇಜಿನಲ್ಲಿ ಟಿ.ಸಿ.ಎಚ್ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಾಹ್ಯ ಅಭ್ಯರ್ಥಿಯಾಗಿ ಬಿ.ಎ ಪದವಿ, ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಮೂಲಕ ಕನ್ನಡದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನಂತರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾಗಿದ್ದಾರೆ.