ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಕೆ. ರತ್ನಪ್ರಭಾ ಅವರು ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾ ರತ್ನಾಪ್ರಭಾ ಅವರು ಬೀದರ್ ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ಜಿಲ್ಲಾಧಿಕಾರಿಗಳಾಗಿ, ವಿವಿಧ ಇಲಾಖೆಗಳಲ್ಲಿ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿವೃತ್ತಿಯ ನಂತರ ಭಾರತ ಜನತಾ ಪಕ್ಷ ಸೇರಿ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದಾರೆ.