ಜನಪ್ರಿಯ ಲೇಖಕಿ ಸುಮಿತ್ರ ಎಲ್.ಸಿ ಅವರು ಹುಟ್ಟಿದ್ದು ತೀರ್ಥಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರ. ತಾಯಿ ಹೊನ್ನಮ್ಮ, ತಂದೆ ಎಲ್.ಚಂದ್ರಪ್ಪಗೌಡ. ಸಾಹಿತ್ಯದಲ್ಲಿ ಸ್ನಾತಕೋತ್ತರ ಪಡೆದಿರುವ ಇವರು ಹಾಲಿ ಅಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬಕುಲದ ದಾರಿ (ಕಾವ್ಯ), ಪಿಂಜರ್(ಕಾದಂಬರಿ ಅನುವಾದ), ನಿರುಕ್ತ(ವಿಮರ್ಶೆ), ಗುಬ್ಬಿ ಹಳ್ಳದ ಸಾಕ್ಷಿಯಲ್ಲಿ(ಕಥಾ ಸಂಕಲನ), ಹೂ ಹಸಿರಿನ ಮಾತು ಇವು ಸುಮಿತ್ರ ಅವರ ಪ್ರಮುಖ ಕೃತಿಗಳಾಗಿವೆ. ಇವರಿಗೆ ನೀಲಗಂಗಾದತ್ತಿ ಬಹುಮಾನ, ಶಿವಮೊಗ್ಗ ಕರ್ನಾಟಕ ಸಂಘದಿಂದ ಎಸ್.ವಿ. ಪರಮೇಶ್ವರಭಟ್ಟ ಪ್ರಶಸ್ತಿ ನೀಡಿ ಗೌರಿವಿಸಲಾಗಿದೆ.