About the Author

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು.

ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು.

1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ನ್ಯಾಷನಲ್ ಬುಕ್ ಟ್ರಸ್ಟ್ ಮೊದಲಾದ ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಇವರ ಇಂಗ್ಲಿಷ್ ಸಾಹಿತ್ಯ ಚರಿತ್ರೆ (1996) ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆಧುನಿಕ ಸಾಹಿತ್ಯ ವಿಮರ್ಶೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಅನಕೃ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಪರಿಷತ್ತಿನ ವಜ್ರಮಹೋತ್ಸವ ಪ್ರಶಸ್ತಿ ಮೊದಲಾದವು ಇವರಿಗೆ ಲಭ್ಯವಾಗಿದೆ.

ಇವರ ಕೆಲವು ಸುಪ್ರಸಿದ್ಧ ಕೃತಿಗಳು ಹೀಗಿವೆ: ಕನ್ನಡದ ಅಳಿವು ಉಳಿವು (ಪ್ರಬಂಧ) ಸಿರಿಸಂಪದ (ವ್ಯಕ್ತಿ ಚಿತ್ರ), ಆಕಾಂಕ್ಷೆ ಮತ್ತು ಆಸೆ (ನಾಟಕ), ಹೊಸಗನ್ನಡ ಸಾಹಿತ್ಯ (ವಿಮರ್ಶೆ), ಕಾದಂಬರಿ ಮತ್ತು ಸಾಮಾನ್ಯ ಮನುಷ್ಯ (ವಿಮರ್ಶೆ), ವಿಲಿಯಂ ಷೇಕ್ಸ್ಪಿಯರ್, ಫ್ರಾನ್ಸ್ ಕಾಫ್ಕ, ಭಾರತೀಯ ಸಾಹಿತ್ಯ ಸಮೀಕ್ಷೆ ಇತ್ಯಾದಿ. ಇವರು ಇಂಗ್ಲಿಷಿನಲ್ಲೂ ಹಲವಾರು ಕೃತಿಗಳನ್ನು ರಚಿಸಿದ್ದಾರೆ.

ಇವರು 20-12-2019ರಂದು ನಿಧನರಾದರು.

 

ಎಲ್.ಎಸ್. ಶೇಷಗಿರಿರಾವ್

(16 Feb 1925-20 Dec 2019)

Books by Author

ABOUT THE AUTHOR