About the Author

ಇತಿಹಾಸಜ್ಞ, ಸಂಶೋಧಕ ಲಕ್ಷ್ಮಣ್‌ ತೆಲಗಾವಿಯವರು 1947 ಜನವರಿ 01 ಹುಟ್ಟಿದ್ದು ಚಿತ್ರದುರ್ಗದಲ್ಲಿ. ಹಲವಾರು ಐತಿಹಾಸಿಕ, ಸಾಮಾಜಿಕ ಚಳುವಳಿಗಳ  ಗ್ರಂಥಗಳ ರಚಿಸಿ ಮತ್ತು ಪ್ರಕಟಿಸಿದ್ಧಾರೆ. ಚಿತ್ರದುರ್ಗ ದರ್ಶಿನಿ, ಇದು ಚಿತ್ರದುರ್ಗ, ಚಿತ್ರದುರ್ಗ ಹ್ಯಾನ್‌ ಇನ್‌ಸೈಟ್‌, ಬುರುಗು (ಚಿಂತನ ಲೇಖನಗಳು), ಕರ್ನಾಟಕ ಹಿಂದುಳಿದ ವರ್ಗಗಳ ಮತ್ತು ದಲಿತ ಚಳುವಳಿಗಳು, ಮೌರ್ಯ ಮತ್ತು ಶಾತವಾಹನಯುಗ, ಚಿತ್ರದುರ್ಗಜಿಲ್ಲಾ ಇತಿಹಾಸ, ಚಿತ್ರದುರ್ಗ ನಾಯಕ ಅರಸರು, ವಿಜಯನಗರಕಾಲದ ರಾಮಾನುಜಕೂಟಗಳು, ಎಪ್ಪತ್ತೇಳು ಪಾಳಯಗಾರರು, ಚಿತ್ರದುರ್ಗದ ಒನಕೆ ಓಬವ್ವ, ಚಾರಿತ್ರಿಕ ವಿವೇಚನೆ, ದೊಡ್ಡೇರಿಕದನ ಮುಂತಾದ ಕೃತಿಗಳನ್ನು ಸ್ವಾತಿ ಪ್ರಕಾಶನ, ವಾಲ್ಮೀಕಿ ಸಾಹಿತ್ಯ ಸಂಪದ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯಗಳು ಪ್ರಕಟಿಸಿವೆ. ‘ಚಂದ್ರವಳ್ಳಿ, ಹುಲ್ಲೂರು ಶ್ರೀನಿವಾಸ ಜೋಯಿಸರ ಐತಿಹಾಸಿಕ ದಾಖಲೆಗಳು, ಐತಿಹಾಸಿಕ ಚಿತ್ರದುರ್ಗ, ಮಿರ್ಜಿಅಣ್ಣಾರಾಯ, ಹರತಿಸಿರಿ, ಸಂಶೋಧನ ಮುಂತಾದ ಅಭಿನಂದನ ಗ್ರಂಥಗಳೂ ಸೇರಿವೆ.

ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆಲವು ಸಂಘ ಸಂಸ್ಥೆಗಳಿಗಾಗಿ ಸ್ಮರಣ ಸಂಚಿಕೆಗಳ ಸಂಪಾದಕರಾಗಿಯೂ ದುಡಿದಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ ‘ಸಂಶೋಧನ ನಿಧಿ’ ಪ್ರಶಸ್ತಿ, ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡಮಿಯಿಂದ ‘ಶ್ರೀ ಗುರು ರವಿದಾಸರತ್ನ’, ಹಿರಿಯೂರಿನ ಏಕನಾಥೇಶ್ವರಿ ಸಂಗೀತ ವಿದ್ಯಾಲಯದಿಂದ ‘ಇತಿಹಾಸಭೂಷಣ’ ಮುಂತಾದ ಪ್ರಶಸ್ತಿಗಳ ಜೊತೆಗೆ ಹಲವಾರು ಸಂಘ-ಸಂಸ್ಥೆಗಳಿಂದ ಸನ್ಮಾನ. ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡಮಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಷಿಪ್‌ ಪಾಣಿಪತ್‌ ಹರಿಯಾಣದ ಸುಭದ್ರಕುಮಾರಿ ಚೌಹಾಣ್‌ ಜನ್ಮಶತಾಬ್ದಿ ಸಮ್ಮಾನ, ದೆಹಲಿಯ ಮಹಾತ್ಮ ಜ್ಯೋತಿ ಬಾಪುಲೆ ರಾಷ್ಟ್ರೀಯ ಪ್ರಶಸ್ತಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಪುರಸ್ಕಾರಗಳು ದೊರೆತಿವೆ.

ಲಕ್ಷ್ಮಣ್ ತೆಲಗಾವಿ

(01 Jan 1947)