ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕ.ರಾ.ವಿ.ಪ.) ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ ಎಂ.ಎ. ಸೇತುರಾವ್ ಅವರು ನಂತರ ಕರಾವಿಪದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಅವರು ಕರ್ನಾಟಕದಲ್ಲಿ ಜನಪ್ರಿಯ ವಿಜ್ಞಾನದ ಬಗ್ಗೆ ಅರಿವು ಮೂಡಿಸಲು ಯತ್ನಿಸಿದವರಲ್ಲಿ ಪ್ರಮುಖರು. ಅವರು ಬೆಂಗಳೂರು ವಿಶ್ವವಿದ್ಯಾಲಯದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದ ಅವರಿಗೆ ವಿಜ್ಞಾನ ಜನಪ್ರಿಯಗೊಳಿಸಿದವರಿಗೆ ನೀಡಲಾಗುವ ಭಾರತ ಸರ್ಕಾರದ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಿನ ಗೌರವ ಪ್ರಶಸ್ತಿ ದೊರೆತಿದೆ.