ಡಾ. ಎಂ.ಜಿ. ಈಶ್ವರಪ್ಪನವರು ದಾವಣಗೆರೆಯ ಡಿ.ಆರ್.ಎಂ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದರು. ಈಶ್ವರಪ್ಪನವರು ತಮ್ಮ ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಗದ್ಯ ಮತ್ತು ಪದ್ಯಗಳ ಬೋಧನೆಯನ್ನು ರಸವತ್ತಾಗಿ ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತಾರೆ. ದಾವಣಗೆರೆಯ ಸಾಹಿತ್ಯವಲಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು 2024 ಜೂನ್ 01 ರಂದು ನಿಧನರಾದರು.
ಇವರು ಡಿ.ಆರ್.ಎಮ್. ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ದಿನಗಳಲ್ಲಿ ಇವರ ರಸವತ್ತಾದ ಕಥೆಗಾರಿಕೆಗೆ, ಮಾತುಗಾರಿಕೆಗೆ ಮನಸೋತು ತಮಗೆ ತರಗತಿ ಇಲ್ಲದ ವಿದ್ಯಾರ್ಥಿಗಳೂ ಕೂಡಾ ಇವರ ತರಗತಿಯಲ್ಲಿ ಹಾಜರಿರುತ್ತಿದ್ದರು. ಈಶ್ವರಪ್ಪನವರು ವಿಮರ್ಶಕರಾಗಿಯೂ ಕೆಲಸ ಮಾಡಿದ್ದಾರೆ. ಸಮಕಾಲೀನ ಸಾಹಿತ್ಯದ ಒಬ್ಬ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಇವರೂ ಒಬ್ಬರು. ತಮ್ಮ ನಿವೃತ್ತಿಯ ಅಂಚಿನಲ್ಲಿ ಎಂ.ಎಸ್.ಬಿ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.