ಕೃಷಿ ವಿಜ್ಞಾನಿಗಳ ನೇಮಕಾತಿ ಸಮಿತಿಯ ನಿವೃತ್ತ ಅಧ್ಯಕ್ಷರಾಗಿ ಡಾ.ಎಂ.ಮಹಾದೇವಪ್ಪ ಸೇವೆ ಸಲ್ಲಿಸಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಪದ್ಮಶ್ರೀ ಡಾ. ಎಂ. ಮಹದೇವಪ್ಪ ಅವರ ಸೇವೆ ಅನನ್ಯ. ವಿವಿಧ ತೆರನಾದ ಹೈಬ್ರಿಡ್ ಅಕ್ಕಿಯನ್ನು ಬೆಳೆಸಿದ ಕೀರ್ತಿ ಅವರಿಗಿದೆ.
ಹೂಕರ್ ಪ್ರಶಸ್ತಿ (1981), ಕರ್ನಾಟಕ ರಾಜೋತ್ಸವ ಪ್ರಶಸ್ತಿ (1984), ಭಾರತ ರತ್ನ ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ (1999) ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.
ರೇಷ್ಮೆ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ, ಭಾರತೀಯ ವಿಜ್ಞಾನ ಬರೆಹಗಾರರ ಸಂಸ್ಥೆ ಸೇರಿದಂತೆ ಹಲವು ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳಿಂದ ಪ್ರಶಸ್ತಿ ಹಾಗೂ ಫೆಲೋಶಿಪ್ ಗಳನ್ನು ಪಡೆದಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯವರು. ಸದ್ಯ, ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ವಾಸ.