About the Author

ವಿಜ್ಞಾನಿ ಎಂ.ಎಸ್.ಎಸ್. ಮೂರ್ತಿ ಅವರು 16-08-1929ರಂದು ಜನಿಸಿದ ಲೇಖಕರು ಸಹ.ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ  40 ವರ್ಷ ಸೇವೆ ಸಲ್ಲಿಸಿ ಈಗ ನಿವೃತ್ತರು. ರೇಡಿಯೇಶನ್ ಬಯೋಫಿಜಿಕ್ಸ್ ನಲ್ಲಿ ಪಿಎಚ್.ಡಿ ಮಾಡಿದ್ದಾರೆ. ಕ್ಯಾನ್ಸರ್‍ ಸೇರಿದಂತೆ ಇತರೆ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುವ ವಿಕಿರಣಗಳು ಹಾಗೂ ಅನುಸರಿಬೇಕಾದ ಸುರಕ್ಷತಾ ನೀತಿಗಳ ಅಧ್ಯಯನ ಇವರ ವಿಶೇಷತೆ. ಸದ್ಯ, ಬೆಂಗಳೂರಿನಲ್ಲಿ ನೆಲೆಸಿದ್ದು, ವೈಜ್ಞಾನಿಕ ವಿಷಯವಾಗಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹಲವಾರು ಲೇಖನಗಳನ್ನು ಬರೆಯುತ್ತಿದ್ದಾರೆ. ಕ್ಯಾನ್ಸರ್, ಖಗೋಳ ವಿಜ್ಞಾನ, ಮಲೇರಿಯಾ, ಪರಮಾಣು, ತಳಿ ವಿಜ್ಞಾನ, ಕಾಲರಾ ವಿಷಯಗಳು ಕುರಿತದ್ದಾಗಿವೆ. 

ಕೃತಿಗಳು: ಆರೋಗ್ಯದ ಅಂಗಳದಲ್ಲಿ ವೈಜ್ಞಾನಿಕ ಪ್ರಗತಿ (ವೈದ್ಯಕೀಯ ಲೇಖನಗಳ ಸಂಗ್ರಹ ಕೃತಿ), ಭಾರತೀಯ ಖಭೌತ ವಿಜ್ಞಾನದ ಪಿತಾಮಹ ಪ್ರೊ. ವೇಣು ಬಾಪು, ಬೈಜಿಕ ವಿದ್ಯುತ್’ ಮತ್ತು ‘ಕಾಲರಾ ನಂಜು. 

ಇವರು 18-12-2012ರಂದು ನಿಧನ ಹೊಂದಿದರು.

 

ಎಂ.ಎಸ್.ಎಸ್. ಮೂರ್ತಿ

(16 Aug 1929-18 Dec 2012)