About the Author

ಕರ್ನಾಟಕ ರಾಜ್ಯದ 13ನೇ ಮುಖ್ಯಮಂತ್ರಿಯಾಗಿ ಹಾಗೂ ಕೇಂದ್ರಸಚಿವರಾಗಿ ರಾಜಕಾರಣದಲ್ಲಿ ವೀರಪ್ಪ ಮೊಯ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ತಂದೆ- ತಮ್ಮಯ್ಯ ಮೊಯ್ಲಿ, ತಾಯಿ ಪೂವಮ್ಮ. ಪ್ರಾಥಮಿಕ ಶಿಕ್ಷಣ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಮೂಡಬಿದರೆಯಲ್ಲಿ ಪೂರೈಸಿ, ಮಂಗಳೂರು ಸರಕಾರಿ ಕಾಲೇಜಿನಲ್ಲಿ ಪದವಿ, ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆ ಹಾಗೂ ಭಾರತೀಯ ಜೀವವಿಮಾ ನಿಗಮದಲ್ಲಿ ಸೇವೆ, ಬೆಂಗಳೂರಿನ ಸರಕಾರಿ ಕಾನೂನು ಕಾಲೇಜಿನಿಂದ ಬಿ.ಎಲ್. ಪದವಿ ಪಡೆದಿದ್ದಾರೆ. ಕಾರ್ಕಳ ಹಾಗೂ ಮಂಗಳೂರಿನಲ್ಲಿ ವಕೀಲ ವೃತ್ತಿಯನ್ನಾರಂಭಿಸಿದ ನಂತರದಲ್ಲಿ ಬೆಂಗಳೂರಿನಲ್ಲಿ ಉಚ್ಚ ನ್ಯಾಯಾಲಯದಲ್ಲಿ ನ್ಯಾಯವಾದಿಗಳಾಗಿದ್ದರು. 1968ರಲ್ಲಿ ಕಾಂಗ್ರೆಸ್ ಸದಸ್ಯರಾಗಿ, 1969ರಲ್ಲಿ ಕಿಸಾನ್ ಸಭಾ ಸ್ಥಾಪಿಸಿದರು. 1972ರಿಂದ 1999ರವರೆಗೆ ಮೊಯ್ಲಿಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು, 1974ರಿಂದ 1977ರವರೆಗೆ ಸಣ್ಣ ಕೈಗಾರಿಕೆ ಖಾತೆಯ ಮಂತ್ರಿಯಾಗಿ, 1980ರಿಂದ 1982ರವರೆಗೆ ಹಣಕಾಸು ಮತ್ತು ಯೋಜನಾ ಖಾತೆಯ ಮಂತ್ರಿಯಾಗಿ, 1989ರಿಂದ 1992ರವರೆಗೆ ವಿವಿಧ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿದ ಅವರು 1992ರಿಂದ 1994 ರವರೆಗೆ ಕರ್ನಾಟಕದ 13ನೇ ಮುಖ್ಯಮಂತ್ರಿಯಾಗಿದ್ದರು. 

ಪ್ರಕಟಿತ ಕೃತಿಗಳು: (ಕಾದಂಬರಿ) ಸುಳಿಗಾಳಿ, ಸಾಗರದೀಪ, ಕೊಟ್ಟ, ತೆಂಬರೆ (ನಾಟಕಗಳು:) ಮಿಲನ, ಪ್ರೇಮವೆಂದರೆ, ಪರಾಜಿತ, (ಕಾವ್ಯ): ಹಾಲು ಜೇನು, ಮತ್ತೆ ಮಡೆಯಲಿ ಸಮರ, ಯಕ್ಷಪ್ರಶ್ನೆ, ಜೊತೆಯಾಗಿ ನಡೆಯೋಣ(ಶ್ರೀಮತಿ ಮಾಲತಿ ಮೊಯ್ಲಿಯವರ ಜೊತೆಯಲ್ಲಿ), ಶ್ರೀರಾಮಾಯಣ ಅನ್ವೇಷಣಂ (ಮಹಾಕಾವ್ಯ) 

ಪ್ರಶಸ್ತಿಗಳು:  ವೀರಪ್ಪ ಮೊಯ್ಲಿ ಅವರಿಗೆ (2000) ಅಲ್-ಅಮೀನ್ ಸದ್ಭಾವನಾ ಪ್ರಶಸ್ತಿ, (2001)ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದವರ ಸುಧಾರಣೆಗಾಗಿ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿ, (2001) ಆರ್ಯಭಟ ಪುರಸ್ಕಾರ, (2002) ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ, (2002) ಗೊರೂರು ಪ್ರತಿಷ್ಠಾನದ ಸಮಗ್ರ ಸಾಹಿತ್ಯ ಪುರಸ್ಕಾರ, (2013) ಬ್ಯಾಂಕಾಕಿನ ಎಷಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗ್ಲೋಬಲ್ ಸಿಟಿಜನ್ ಪ್ರಶಸ್ತಿ, ನ್ಯಾಯಾಂಗದಲ್ಲಿನ ವೈಶಿಷ್ಟ್ಯಮಯ ಕೊಡುಗೆಗಳಿಗಾಗಿ ಯುನೈಟೆಡ್ ಕಿಂಗ್ಡಂನ ಹೌಸ್ ಆಫ್ ಕಾಮನ್ಸ್ ನೀಡುವ ನೆಕ್ಸ್ಟ್ ಸ್ಟೆಪ್ ಫೌಂಡೆಶನ್ ಪ್ರಶಸ್ತಿ, ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸಂದಿದೆ. ‘ಶ್ರೀರಾಮಾಯಣ ಅನ್ವೇಷಣಂ’ ಕೃತಿಗೆ ಭಾರತೀಯ ಜ್ಞಾನಪೀಠ ಪ್ರತಿಷ್ಠಾನ ನೀಡುವ 2010 ರ ಸಾಲಿನ ಮೂರ್ತಿದೇವಿ ಪ್ರಶಸ್ತಿ ಹಾಗೂ 2014ರ ಸಾಲಿನ ಪ್ರತಿಷ್ಟಿತ ‘ಸರಸ್ವತಿ ಸಮ್ಮಾನ್’ ಪ್ರಶಸ್ತಿ ಗೌರವ ಹಾಗೂ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಎಂ. ವೀರಪ್ಪ ಮೊಯ್ಲಿ

(12 Jan 1940)

Awards

BY THE AUTHOR