ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಜನಿಸಿದರು. ತಾಯಿ ಶಿವಕಾಂತಮ್ಮ ಪಾಟೀಲ. ತಂದೆ ಅಮರಣ್ಣಗೌಡ ಪಾಟೀಲ. ಹುಟ್ಟೂರಿನಲ್ಲಿಯೇ ಪ್ರೌಢಶಾಲಾ ಶಿಕ್ಷಣ ಪಡೆದ ಇವರು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಲಿಂಗಸುಗೂರಿನ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಎಂ.ಬಿ. ಹೊರಕೇರಿಯವರ ಬದುಕು ಬರಹ’ ವಿಷಯದ ಕುರಿತು ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ. ಸಾಹಿತ್ಯಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಇವರು ರಚಿಸಿದ ಕೃತಿ ರಂಗಮ್ಮನ ಹೊಸ್ತಿಲು ದಾಟಿ.