ರಂಗಭೂಮಿ, ಮಕ್ಕಳ ಸಾಹಿತ್ಯದಲ್ಲಿ ವಿಶೇಷ ಒಲವು ಇರುವ ಮಂಡಲಗಿರಿ ಪ್ರಸನ್ನ 1963 ರ ಅಕ್ಟೋಬರ್ 18 ರಂದು ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ಜನಿಸಿದರು. ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ಮಾರ್ಕೆಟಿಂಗ್ ವಿಭಾಗದ ಹಿರಿಯ ಅಧಿಕಾರಿಯಾಗಿ 30 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿದ್ದಾರೆ.
‘ಕನಸು ಅರಳುವ ಆಸೆ (2000), ಅಮ್ಮ ರೆಕ್ಕೆ ಹಚ್ಚು (2003), ನಿನ್ನಂತಾಗಬೇಕು ಬುದ್ಧ (2016) - ಕವನ ಸಂಕಲನ. ‘ಏಳು ಮಕ್ಕಳ ನಾಟಕಗಳು’ (2016) - ಮಕ್ಕಳ ನಾಟಕಗಳು. ಪದರಗಲ್ಲು, ಕವಿರಾಜ - ಸ್ಮರಣೆ ಸಂಚಿಕೆ ಸಂಪಾದಿತ ಕೃತಿಗಳು. ಕನ್ನಡದ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ಧಾರೆ. ಅವರ ಸಾಹಿತ್ಯ ಸೇವೆಗೆ ವಿಜಯಪುರ ಜಿಲ್ಲೆಯ 2003 ರ `ಮಕ್ಕಳ ಸಾಹಿತ್ಯ ರತ್ನ ಪ್ರಶಸ್ತಿ’, ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ `ಶಿಕ್ಷಣ ಸಿರಿ’ ಪ್ರಶಸ್ತಿಗಳು ಲಭಿಸಿವೆ.