About the Author

‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು.

ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್ (1927) ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ (1930) ಡೆಪ್ಯುಟಿ ಕಮೀಷನರ್ (1934) ಎಕ್ಸೈಜ್ ಕಮೀಷನರ್ (1940) ಮೊದಲಾದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 1943ರಲ್ಲಿ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತರಾದರು.

ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ (1943-48) ಅಧ್ಯಕ್ಷರಾಗಿ (1950-64) ಸೇವೆ ಸಲ್ಲಿಸಿರುವ  ಇವರು ‘ಜೀವನ’ ಮಾಸಪತ್ರಿಕೆಯನ್ನು 25 ವರ್ಷ ಪ್ರಕಟಿಸಿದರು. ಕನ್ನಡ ಏಕೀಕರಣಕ್ಕೆ ಶ್ರಮಿಸಿದರು. ಸಹಾಯನಿಧಿ ಮೂಲಕ ಕನ್ನಡ ಲೇಖಕರನ್ನು ಬೆಳಕಿಗೆ ತಂದರು. ಪಿಇಎನ್ ಸಂಸ್ಥೆಯ ಉಪಾಧ್ಯಕ್ಷರಾಗಿ (1964) ಆಯ್ಕೆಯಾಗಿದ್ದರು. ಅಖಿಲ ಭಾರತ ಪ್ರಾಚ್ಯ ಸಮ್ಮೇಳನ (1942) ಕನ್ನಡ ವಿಭಾಗದ ಅಧ್ಯಕ್ಷರಾಗಿದ್ದರು..

ಮೈಸೂರು ಮಹಾರಾಜರು ರಾಜಸೇವಾ ಪ್ರಸಕ್ತ (1942) ಬಿರುದು ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (1956), ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ (1968), ವರ್ಧಮಾನ ಪ್ರಶಸ್ತಿ (1983), ಮೈಸೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್ (1977) ಭಾರತೀಯ ಜ್ಞಾನಪೀಠ ಪ್ರಶಸ್ತಿ (1983) ಕರ್ನಾಟಕ ಸರ್ಕಾರದ ಸನ್ಮಾನ (1984) ನಾಡಿನ ನಾನಾ ಸಂಸಂಸ್ಥೆಗಳಿಂದ ನೂರಾರು ಸನ್ಮಾನ ಪ್ರಶಸ್ತಿ ಗೌರವಗಳು ಮಾಸ್ತಿ ಅವರಿಗೆ ಸಂದಿವೆ. ಅವರು 1986ರ ಜೂನ್ 7ರಂದು ನಿಧನರಾದರು.

ಸಣ್ಣಕಥೆಗಳು(೧0 ಭಾಗಗಳು), ನವರಾತ್ರಿ(ಕಥನ ಕವನಗಳು),  ಚಿಕವೀರರಾಜೇಂದ್ರ(ಕಾದಂಬರಿ),

ಕೃಷ್ಣಕರ್ಣಾಮೃತ (ಸಂಸ್ಕೃತ ಕಾವ್ಯಾನಂದ), ನಮ್ಮ ನುಡಿ(ಭಾಷಾಶಾಸ್ತ್ರ), ಷೇಕ್ಸ್ಪಿಯರನ ನಾಟಕಗಳು(ಗದ್ಯಾನುವಾದ),  ಜನಪದ ಸಾಹಿತ್ಯ(ಪ್ರಬಂಧ), ಪುರಂದರದಾಸ, ಕನಕಣ್ಣ(ನಾಟಕಗಳು),  ಪ್ರಸಂಗ(೪ ಭಾಗಗಳು), ಸಂಪಾದಕೀಯ(೫ ಭಾಗಗಳು),  ಶ್ರೀರಾಮಪಟ್ಟಾಭಿಷೇಕ (ಕಥನಕಾವ್ಯ),  ಸರ್ ಎಂ. ವಿಶ್ವೇಶ್ವರಯ್ಯ(ಸಂಪಾದನೆ)

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)

(08 Jun 1891-07 Jun 1986)

Books by Author

Awards

BY THE AUTHOR

ABOUT THE AUTHOR