ಯುವ ಬರಹಗಾರ ಮೆಹಬೂಬ್ ಮಠದ ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದವರು. ಪ್ರಸ್ತುತ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಇವರು ಕನ್ನಡ ಸಾಹಿತ್ಯದೆಡೆಗಿನ ಒಲವುಳ್ಳವರು. ಇವರ ಚೊಚ್ಚಲ ಕೃತಿ 'ಬಿಸಿಲು ಕಾಡುವ ಪರಿ' ಕವನ ಸಂಕಲನ ಕನ್ನಡ ಪುಸ್ತಕ ಪ್ರಾಧಿಕಾರದ 2018 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರೋತ್ಸಾಹ ಧನ ಪಡೆದು ಪ್ರಕಟವಾಗಿದ್ದು, ಈ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 2019ನೇ ಸಾಲಿನ ನಾ.ಕು. ಗಣೇಶ ದತ್ತಿ ಪ್ರಶಸ್ತಿ ಲಭಿಸಿದ್ದು, ಇದೇ ಕೃತಿಗೆ ಬೆಳಗಾವಿಯ ಬಿ. ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ ಲಭಿಸಿದೆ.