About the Author

ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. 1957 ರ ಜನೆವರಿ 17 ರಂದು ಜನನ. ಸಾಹಿತ್ಯದಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವೀಧರರು. ರಿಸರ್ವ್ ಬ್ಯಾಂಕಿನಲ್ಲಿ ಅಧಿಕಾರಿ.ಮಹಿಳಾ ಪರ ಚಿಂತಕಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು ಮಹಿಳಾ ಹೋರಾಟಗಳಿಗೆ ಸೈದ್ಧಾಂತಿಕ ನೆಲೆ ಕಲ್ಪಿಸಿಕೊಟ್ಟವರು. ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.  ಕೃತಿಗಳು 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ಜೋಲಿಯೂ ಕ್ಯೂರಿ (ಅನುವಾದ), ಭಗತ್‌ಸಿಂಗ್ ಮತ್ತು ಅವನ ಸಂಗಾತಿಗಳು (ವ್ಯಕ್ತಿ ಚಿತ್ರ), ನಾನೇಕ ನಾಸ್ತಿಕ (ಅನುವಾದ), ತ್ರಿವೇಣಿಯವರ ಬಗ್ಗೆ ಬರೆದ ಲೇಖನಗಳ ಸಂಗ್ರಹ (ಸಂಪಾದಿತ). ಮುಖತಃ (ಸಂದರ್ಶನಗಳ ಲೇಖನಗಳ ಸಂಕಲನ) ಬಿ.ಎನ್. ಸುಮಿತ್ರಾಬಾಯಿಯವರೊಡನೆ ಸಂಪಾದಿತ ಮತ್ತೊಂದು ಮಹತ್ತರ ಕೃತಿ-ದಕ್ಷಿಣ ಭಾರತದ ಸಾಂಸ್ಕೃತಿಕ ಅಧ್ಯಯನದ ಸಾಂಸ್ಕೃತಿಕ ಕೋಶ. ‘AN ENCYCLOPAEDIA OF SOUTH INDIAN CULTURE’ ಗ್ರಂಥವನ್ನು ಪ್ರೊ. ಜಿ. ರಾಮಕೃಷ್ಣ ಮತ್ತು ದೇವಿಪ್ರಸಾದ್ ಚಟ್ಟೋಪಾಧ್ಯಾಯರೊಡನೆ ಸಂಪಾದಿಸಿದ್ದಾರೆ. ’ಮಹಿಳೆ ಬಿಡುಗಡೆಯ ಹಾದಿಯಲ್ಲ” ಕೃತಿಗೆ ಸಾವಿತ್ರಮ್ಮ ದತ್ತಿ ಪ್ರಶಸ್ತಿ ಹಾಗೂ ’ಮಹಿಳಾ ಚಳವಳಿಯ ಮಜಲುಗಳ” ಕೃತಿಗೆ ಕ.ಸಾ.ಪ ದತ್ತಿನಿಧಿ ಪ್ರಶಸ್ತಿ ದೊರೆತಿದೆ.

ಎನ್. ಗಾಯತ್ರಿ (ಬೆಂಗಳೂರು)

(17 Jan 1957)

BY THE AUTHOR