ಕನ್ನಡ ಶಾಸನ, ಭಾಷೆ, ದಾಸ ಸಾಹಿತ್ಯ, ಶಾಸ್ತ್ರೀಯ ಸಾಹಿತ್ಯದಲ್ಲಿ ಅಪಾರವಾಗಿ ದುಡಿದವರು ನಾ. ಗೀತಾಚಾರ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಹೆಜ್ಜಾಜಿಯಲ್ಲಿ 1958 ಫೆಬ್ರವರಿ 02 ರಂದು ಜನಿಸಿದರು. ತಂದೆ ನಾರಾಯಣಸ್ವಾಮಿ, ತಾಯಿ ಲಕ್ಷ್ಮೀದೇವಮ್ಮ. ಶೇಷಾದ್ರಿಪುರಂನ ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದರು. ನಾಟಕ,ಕಲೆ, ಸಂಸ್ಕೃತಿ, ಸಾಹಿತ್ಯ ಹೀಗೆ ಹಲವು ರಂಗದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. `ಹರಿದಾಸ ಸಾಹಿತ್ಯದಲ್ಲಿ ವಿಶಿಷ್ಟಾದ್ವತ’ ಅವರ ಪ್ರಮುಖ ಕೃತಿ. ‘ಆಳ್ವಾರರ ಹಾಡುಗಳು’ ಅವರ ಅನುವಾದಿತ ಕೃತಿ.