About the Author

ಎನ್ಕೆ (ಎನ್‌.ಕೆ. ಕುಲಕರ್ಣಿ) ಅವರು ಎನ್.ಕೆ , ಎಂದೇ ಸುಪ್ರಸಿದ್ಧರಾದ ಎ.ಕೆ.ಕುಲಕರ್ಣಿಯವರು, 1913 ರ ಆಗಸ್ಟ್ 29 ರಂದು ಗದುಗಿನಲ್ಲಿ ಜನಿಸಿದರು. 

ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ .(ಕನ್ನಡ ಆನರ್ಸ್) ಪದವಿಯನ್ನು ಹಾಗು ವಿದ್ಯಾರಣ್ಯ ಪಾರಿತೋಷಕವನ್ನು ಪಡೆದರು.1938 ರಲ್ಲಿ ಕನ್ನಡ  ಹಾಗೂ ಸಂಸ್ಕೃತದಲ್ಲಿ ಎಂ.ಎ. ಪದವಿಯನ್ನು ಪಡೆದರು. 1940 ರಲ್ಲಿ ಬಿ.ಟಿ. ಪದವಿ ಪಡೆದರು. 

1943 ರಿಂದ 1946 ರವರೆಗೆ ಕನ್ನಡ ಸಂಶೋಧನ ಸಂಸ್ಥೆಯಲ್ಲಿ ಕುಮಾರವ್ಯಾಸನ ಕುರಿತು ಸಂಶೋಧನೆ ಮಾಡಿ ಪ್ರಬಂಧರಚನೆ ಮಾಡಿದರು. 1971 ರಲ್ಲಿ  ಧಾರವಾಡ ಆಕಾಶವಾಣಿಯಿಂದ ಕಾರ್ಯಕ್ರಮ ನಿರ್ವಾಹಕರಾಗಿ ನಿವೃತ್ತರಾದರು.

ಸಾವಿನ ಉಡಿಯಲ್ಲಿ, ಎರಡನೆಯ ಸಂಬಂಧ, ವೈನಿ, ಕಲೋಪಜೀವಿ, ಗೌರಿ ಶಂಕರ, ಮೂರು ತಲೆಮಾರು, ಲಲಿತಾ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ. 

 

ಎನ್ಕೆ (ಎನ್‌.ಕೆ. ಕುಲಕರ್ಣಿ)

(29 Aug 1913-23 Apr 2005)

ABOUT THE AUTHOR