ನ. ರತ್ನ ಎಂತಲೇ ಪರಿಚಿತರಾಗಿರುವ ನಾಟಕಕಾರ ನಟೇಶ ರತ್ನ ಅವರು ಹುಟ್ಟಿದ್ದು ತಮಿಳುನಾಡಿನ ಚಿದಂಬರಂನಲ್ಲಿಯಾದರೂ ವಿದ್ಯಾಭ್ಯಾಸ ನಡೆಸಿದ್ದು ಮಾತ್ರ ಮೈಸೂರಿನಲ್ಲಿ. ವೃತ್ತಿಯಲ್ಲಿ ವಾಕ್‌ಶ್ರವಣ ಚಿಕಿತ್ಸಾ ತಜ್ಞರಾಗಿರುವ ಇವರು ನಟರು ನಾಟಕಕಾರರು ಆಗಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ, ಬಿ.ಎಡ್ ಪದವಿ ಪಡೆದ ಇವರು ಅಮೆರಿಕದಲ್ಲಿ ಉನ್ನತ ವ್ಯಾಸಾಂಗ ನಡೆಸಿದರು. ವಾಕ್ ಶ್ರವಣ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿದ್ದಾರೆ.
ಹವ್ಯಾಸಿ ರಂಗಭೂಮಿಯ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಇವರು ಎಲ್ಲಿಗೆ, ಬೊಂತೆ, ಗೋಡೆ ಬೇಕೆ ಗೋಡೆ, ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನು ರಚಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಎಂ.ಎನ. ರಾಯ್ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಇವರಿಗೆ ದೊರೆತಿವೆ.