ಕಲಾವಿದ, ಕತೆಗಾರ ನಾರಾಯಣ ಯಾಜಿ ಅವರು ಉತ್ತರ ಕನ್ನಡದ ಕೆರೆಮನೆ ಗುಣವಂತೆಯ ಸಮೀಪದ ಸಾಲೇಬೈಲಿನವರು. ಯಕ್ಷಗಾನ ತಾಳಮದ್ದಲೆಯಲ್ಲಿ ಹೆಸರು ಮಾಡುತ್ತಿರುವವರು. ಯಕ್ಷಗಾನ, ಅರ್ಥಶಾಸ್ತ್ರ ಮತ್ತು ಮೈಕ್ರೊ ಫೈನಾನ್ಸಿಂಗ್. ಯಕ್ಷಗಾನ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ಅವರ ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ವಿಜಯಪುರದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಪ್ರಾದೇಶಿಕ ಕಛೇರಿ) ಸಹಾಯಕರಾಗಿದ್ದು, ‘ನೈದಿಲೆಯ ಒಡಲು’ ಅವರ ಮೊದಲ ಕಥಾ ಸಂಕಲನ. ಉತ್ಥಾನ ಪತ್ರಿಕೆಯ ಕಥಾಸ್ಪರ್ಧೆಯಲ್ಲಿ ಅವರ ‘ವ್ಯಸ್ತ’ ಕಥೆಗೆ ಬಹುಮಾನ ಲಭಿಸಿದೆ.