ಡಾ. ನವೀನ್ ಹಳೇಮನೆ ಹುಟ್ಟಿದ್ದು 1975 ತುಮಕೂರು ಜಿಲ್ಲೆಯ ಹಾಲುಗೋಣದಲ್ಲಿ. ಭಾಷಾವಿಜ್ಞಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದಿರುವ ಅವರು ಇಂಗ್ಲಿಷ್ ಭಾಷೆ ಮತ್ತು ಸಾಹಿತ್ಯದ ಬೋಧಕ, ಮೃದುಕೌಶಲ್ಯಗಳ ತರಬೇತುದಾರ ಹಾಗು ಅನುವಾದಕ.
ರವೀಂದ್ರನಾಥ ಟ್ಯಾಗೋರರ ಗೀತಾಂಜಲಿ (2007), ಇಂದುಮತಿ ಶೇವರೆ ಅವರ ತಾತ್ಯಾ ಟೋಪೆ (2012) ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ಧಾರೆ. ಸಹ-ಅನುವಾದಕನಾಗಿ ಕಮಲಾ ಮುಕುಂದ ಅವರ ‘ಇವತ್ತು ಶಾಲೆಯಲ್ಲಿ ನೀನೇನು ಪ್ರಶ್ನೆ ಕೇಳಿದೆ?’ ಹಾಗೂ ಆ ಭಾಷೆ ಈ ಭಾಷೆಯಂತಲ್ಲ ಈ-ಭಾಷೆ (2010) ಮತ್ತು ಇಂಗ್ಲಿಷ್ ಕಲಿ(ಯೋ)ಸೋ ಆಟ (2012) ಎಂಬ ಕೃತಿಗಳು ಪ್ರಕಟವಾಗಿವೆ. ಪ್ರಸ್ತುತ ರಾಮನಗರ ಜಿಲ್ಲೆಯ ಲಕ್ಷ್ಮೀಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.