About the Author

ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್‌. ಮೆಡಿಕಲ್‌ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 

ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್‌, ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಶ್ರೇಷ್ಠ ವಿಜ್ಞಾನ ಸಂವಹನಕಾರ ಎಂಬ ಗೌರವ, ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ, ಮೈಸೂರಿನ ವಿಶ್ವಮಾನವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನುಡಿಸಿರಿ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿವೆ. 23ನೇ ನುಡಿಹಬ್ಬದಲ್ಲಿ ಕನ್ನಡ ವಿಶ್ವವಿದ್ಯಾಲಯವು ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಪ್ರದಾನ ಮಾಡಿ ಗೌರವಿಸಿದೆ.

 

ಪಿ.ಎಸ್. ಶಂಕರ್

(01 Jan 1936)