ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.
ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ..
ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ಅಂತರ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಸೇರಿ ಒಟ್ಟು 45ಕ್ಕೂ ಹೆಚ್ಚು ಪ್ರಕಟಿತ. ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ‘ಶೋಧನೆ’ ಸುಧಾ ವಾರ ಪತ್ರಿಕೆಯ ಕಾದಂಬರಿ ಸ್ಪರ್ಧೆ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು.
ಈ ಲೇಖಕರ ”ಧರ್ಮಕಾರಣ’ ಕೃತಿಯು ಸಾಹಿತ್ಯ ವಲಯದಲ್ಲಿ ವಿವಾದ ಸೃಷ್ಟಿಸಿತ್ತು.