About the Author

ವಿಜ್ಞಾನ ಲೇಖಕ, ಅಂಕಣಕಾರ ಪಿ.ಆರ್. ವಿಶ್ವನಾಥ್ ಅವರು ಮೂಲತಃ ಬೆಂಗಳೂರಿನವರು. 1942ರಲ್ಲಿ ಜನಿಸಿದ ಪಿ.ಆರ್. ವಿಶ್ವನಾಥ್ ಅವರು ಪಾಲಹಳ್ಳಿ ವಿಶ್ವನಾಥ್ ಎಂದೇ ಪ್ರಸಿದ್ಧರಾದವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಸಿ ಪೂರೈಸಿದ ಅವರು ಆ್ಯನ್ ಆರ್ಬರ್ ಮಿಶಿಗನ್ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪಡೆದರು. ಆನಂತರ ಮುಂಬಯಿಯ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ (ಟಿ.ಐ.ಎಫ್.ಆರ್)ಯಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಬೆಂಗಳೂರಿನ ಭಾರತೀಯ ಖಭೌತ ಸಂಸ್ಥೆ (ಐ.ಐ.ಎ) ಸಂದರ್ಶಕ ಪ್ರಾಧ್ಯಾಪಕರು; ಕ್ಯಾಲಿಫೋರ್ನಿಯ ಮತ್ತು ಮೇರಿಲ್ಯಾಂಡ್ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರು, ಭಾರತ ಮತ್ತು ಅಮೆರಿಕದಲ್ಲಿ ಹಲವಾರು ಭೌತವಿಜ್ಞಾನ ಮತ್ತು ಖಗೋಳ ವಿಜ್ಞಾನದ ಪ್ರಯೋಗಗಳಲ್ಲಿ ಭಾಗಿಯಾಗಿದ್ದರು. ಅಮೆರಿಕದ ಮುಖ್ಯ ಪ್ರಯೋಗಾಲಯಗಳಾದ ಫರ್ಮಿ ಲ್ಯಾಬ್, ಲಾಸ್ ಆಲಮೋಸ್ ಲ್ಯಾಬ್, ಗೊಡಾರ್ಡ್ ಸ್ಪೇಸ್‌ ಸೆಂಟರ್‌ಗಳಲ್ಲಿ ಅವರು ಕೆಲಸ ಮಾಡಿದ್ದಾರೆ. 100ಕ್ಕೂ ಹೆಚ್ಚು ವೈಜ್ಞಾನಿಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.

ಸಾಹಿತ್ಯ, ಚರಿತ್ರೆ ಮತ್ತು ವಿಜ್ಞಾನ ಅವರ ಆಸಕ್ತ ಕ್ಷೇತ್ರಗಳು. ಮೂಲಭೂತ ವಿಜ್ಞಾನದ ಸ್ವಾರಸ್ಯವನ್ನು ಜನರಿಗೆ ಅರ್ಥ ಮಾಡಿಸಲು ಮತ್ತು ವೈಜ್ಞಾನಿಕ ಮನೋಭಾವದ ಅರಿವು ಮೂಡಿಸಲು ಕಳೆದ ಕೆಲವು ವರ್ಷಗಳಿಂದ ಕನ್ನಡದಲ್ಲಿ ವಿಜ್ಞಾನ ಸಂವಹನಕಾರ್ಯವನ್ನು ಮಾಡುತ್ತಿದ್ದಾರೆ. ಕನ್ನಡದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಮತ್ತು ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಮತ್ತು ವಿಜ್ಞಾನದ ಕುರಿತ ಟಿವಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ. ಇವರ ಕೃತಿಗಳು “ಆಕಾಶದಲ್ಲೊಂದು ಮನೆ”, “ಕಣ ಕಣ ದೇವಕಣ”, “ಭೂಮಿಯಿಂದ ಬಾನಿನತ್ತ”, “ಪಾಪ ಬ್ಲೂಟೊ” ಇತ್ಯಾದಿ

ಪಾಲಹಳ್ಳಿ ವಿಶ್ವನಾಥ್ (ಪಿ.ಆರ್. ವಿಶ್ವನಾಥ್)

BY THE AUTHOR