About the Author

ಬರಹಗಾರರಾದ ಪ್ರಭುಶಂಕರ ಅವರು ಜನಿಸಿದ್ದು 1929  ಫೆಬ್ರುವರಿ 15ರಂದು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕುವೆಂಪು ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಭಾವಗೀತೆ’ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು. 

ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು  ಅಮೆರಿಕ ಭೇಟಿಯ ಕುರಿತು ’ಅಮೆರಿಕಾದಲ್ಲಿ ನಾನು ಮತ್ತು ಶಾಂತಿ’ ಎಂಬ ಪ್ರವಾಸ ಕಥನ ರಚಿಸಿದ್ದಾರೆ. ಅವರ ಕೆಲವು ಕೃತಿಗಳು- ಕನ್ನಡದಲ್ಲಿ ಭಾವಗೀತೆ, ಅಂಗುಲೀಮಾಲ, ಆಮ್ರಪಾಲಿ, ಖಲೀಲ್ ಗಿಬ್ರಾನ್, ಕಾವ್ಯಯೋಗ, ಅಮೆರಿಕದಲ್ಲಿ ನಾನು ಶಾಂತಿ, ನಿವೇದಿತಾ, ಜನ-ಮನ, ಚಿಂತೆ-ಚಿಂತನೆ, ಮಂದಹಾಸ ಮೀಮಾಂಸೆ ಇತ್ಯಾದಿ. 

ಪ್ರಭುಶಂಕರ

(15 Feb 1929)