About the Author

ಲೇಖಕ, ಅನುವಾದಕ ಪ್ರಮೋದ ಮುತಾಲಿಕ ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿಯವರು. ಬೆಂಗಳೂರಿನ  ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ 37 ವರ್ಷ ಇಂಗ್ಲಿಷ್ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂಗ್ಲಿಷ್, ಕನ್ನಡ ಭಾಷೆಗಳಲ್ಲಿ ಪ್ರಭುತ್ವ ಹೊಂದಿರುವ ಇವರು ಅನುವಾದ ಮತ್ತು ವಿಮರ್ಶೆಯಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಜಗತ್ತಿನ ಶ್ರೇಷ್ಠ ಕೃತಿಗಳನ್ನು ಕನ್ನಡಕ್ಕೆ ಮತ್ತು ಕನ್ನಡದ ಶ್ರೇಷ್ಠ ಕೃತಿಗಳನ್ನು ಇಂಗ್ಲೀಷಗೆ ಅನುವಾದಿಸಿದ್ದಾರೆ. ಚಿನುವ ಅಚಿಬೆ ಯ Things Fall Apart, ಆರ್. ಕೆ. ನಾರಾಯಣರ The Guide, ಸ್ಕಾಟ್ ಫಿಜರಾಲ್ಡ್ ರ Great Gatsby ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇದಲ್ಲದೆ ಜಗತ್ತಿನ ಅಪರೂಪದ ಕಥೆಗಳನ್ನು ಕನ್ನಡಕ್ಕೆ ಕಣಜ ಎಂಬ ಹೆಸರಿನಲ್ಲಿ ಪರಿಚಯಿಸಿದ್ದಾರೆ. ಶಿವರಾಮ ಕಾರಂತರ ಅಳಿದ ಮೇಲೆ ಕಾದಂಬರಿಯನ್ನು Beyond Life ಹೆಸರಿನಲ್ಲಿ ಇಂಗ್ಲಿಷ್ ಗೆ ಅನುವಾದಿಸಿದ್ದಾರೆ. ಹೆಚ್. ನರಸಿಂಹಯ್ಯನವರ ಆತ್ಮ ಕಥೆ ಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ. ಯಶವಂತ ಚಿತ್ತಾಲರ ಕಥೆಗಳನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ. ಇತ್ತೀಚಿಗೆ ಜಗತ್ತಿನ  ಶ್ರೇಷ್ಠ ಕವನಗಳನ್ನು ಅನುವಾದಿಸಿ ಕ್ಷಿತಿಜ ಎಂಬ ಸಂಕಲನದಲ್ಲಿ ಪ್ರಕಟಿಸಿದ್ದಾರೆ. ಇವರ 'ಬಿಯಾಂಡ್ ಲೈಫ್' ಇಂಗ್ಲಿಷ್ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅಮೆರಿಕ ಕನ್ನಡ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ. 

ಪ್ರಮೋದ ಮುತಾಲಿಕ

BY THE AUTHOR