ಲೇಖಕ ಡಾ. ಪುಂಡಿಕ್ಯಾ ಗಣಪಯ್ಯ ಭಟ್ ಅವರು ಮೂಡಬಿದಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕರು. ತುಳುನಾಡಿನ ಇತಿಹಾಸ, ವಾಸ್ತುಶಿಲ್ಪ ಹಾಗೂ ಶಾಸನಗಳ ಕುರಿತ ಸಂಶೋಧಕರು. ಪುರಾತತ್ವ ವಿಭಾಗಗಳಿಗೆ ಸಂಬಂಧಿಸಿ ಗ್ರೀಸ್ ಹಾಗೂ ಇಂಗ್ಲೆಂಡ್ ನಲ್ಲಿ ತರಬೇತಿ ಪಡೆದಿದ್ದು, ಈ ಕುರಿತು ಇಂಗ್ಲಿಷ್ ಹಾಗೂ ಕನ್ನಡದಲ್ಲಿ ನೂರಕ್ಕೂ ಅಧಿಕ ಲೇಖನಗಳನ್ನು ಬರೆದಿದ್ದಾರೆ. ಬಟ್ವಾಳ್ ತಾಲೂಕು (2017) ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಸಂದಿದೆ. ಹಂಪಿಯ ಕನ್ನಡ ವಿ.ವಿ. ಹಾಗೂ ಮಣಿಪಾಲ ವಿ.ವಿ.ಗಳ ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶಕರು. ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳಲ್ಲಿ ಉಪನ್ಯಾಸಗಳನ್ನು ಮಂಡಿಸಿದ್ದಾರೆ.
ಕೃತಿಗಳು: ಯುರೋಪ ನೆನಪುಗಳು (ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದ ಕೃತಿ), ತೌಳವ (ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದ ಕೃತಿ).