About the Author

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಉಡುಪಿಯ ಕುಂದಾಪುರ ತಾಲ್ಲೂಕಿನ ತಲ್ಲೂರು ಗ್ರಾಮದಲ್ಲಿ 1969ರಲ್ಲಿ ಜನಿಸಿದರು. ಅಲ್ಲೇ ಪ್ರಾಥಮಿಕ ಶಿಕ್ಷಣ, ಸುರತ್ಕಲ್ಲಿನಲ್ಲಿ ಮಾಧ್ಯಮಿಕ ಮತ್ತು ಪದವಿ ಶಿಕ್ಷಣ ಪೂರ್ಣಗೊಳಿಸಿದ ಅವರು ಕರಾವಳಿ ಅಲೆ, ಕೆನರಾಟೈಮ್ಸ್, ಜನಂತರಂಗ ಬಳಗದಲ್ಲಿ ಪತ್ರಕರ್ತರಾಗಿ ದುಡಿಮೆ ಆರಂಭಿಸಿದರು. ಪಟ್ಟಾಂಗ ಎಂಬ ಪತ್ರಿಕೆ ಮತ್ತು ಸವಿ ಎಂಬ ಜಾಹೀರಾತು ಏಜೆನ್ಸಿ ಪ್ರಾರಂಭಿಸಿದ ಅವರು 2000 ಇಸವಿಯಲ್ಲಿ ಉದಯವಾಣಿ ಆನ್ ಲೈನ್ ಆವೃತ್ತಿ ಪ್ರಾರಂಭಿಸಿದಾಗ ಅದರ ಸುದ್ದಿ ಸಂಪಾದಕರಾಗಿ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸಿದರು. 2001ರಲ್ಲಿ ಉದಯವಾಣಿ ಆರೋಗ್ಯ ಪುರವಣಿಯಲ್ಲಿ ಆರಂಭಗೊಂಡಾಗ ಅದರ ಸಂಪಾದಕರಾಗಿ ಸೇವೆಸಲ್ಲಿಸಿದ ಅವರು 2017ರ ತನಕವೂ ಆರೋಗ್ಯವಾಣಿಯ ಸಂಪಾದಕೀಯ ಉಸ್ತುವಾರಿ ನೋಡಿಕೊಂಡರು.

ಈ ನಡುವೆ 2001ರ ವೇಳೆಗೆ ದೇಶದಲ್ಲಿ ಗ್ಲೋಬಲೈಸೇಷನ್ ಚಟುವಟಿಕೆಗಳು ಆರಂಭಗೊಂಡಾಗ, ಅನುವಾದಕನಾಗಿ ಫ್ರೀಲ್ಯಾನ್ಸ್ ವೃತ್ತಿ ಆರಂಭಿಸಿದರು. ಮುಂದೆ 27ರಲ್ಲಿ ತಲ್ಲೂರ್ಸ್ ಇನ್ಫೋವ್ಯಾಲಿಡೇಷನ್ಸ್ ಪ್ರೈ.ಲಿ ಎಂಬ ಏಷ್ಯನ್ ಭಾಷಾ ಸೇವೆಗಳ ಸಂಸ್ಥೆ ಆರಂಭಿಸಿದರು. ಕಳೆದ 15 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಈ ಸಂಸ್ಥೆ 2011ರಿಂದಲೂ ISO ಪ್ರಾಮಾಣಿತವಾಗಿದೆ. 2008ರಿಂದ ತಲ್ಲೂರಿನಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್(ರಿ.) ಮೂಲಕ ನಾರಾಯಣ ವಿಶೇಷ ಮಕ್ಕಳ ಶಾಲೆ ಮತ್ತಿತರ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಲೇ 2015ರಲ್ಲಿ ಪ್ರೊಡಿಜಿ ಮುದ್ರಣ -ಸಂಸ್ಥೆ ಆರಂಭಿಸಿದರು. 

ಪ್ರಕಟಿತ ಕೃತಿಗಳು; 'ನುಣ್ಣನ್ನ ಬೆಟ್ಟ' (2017), 'ತಲ್ಲೂರು ಎಲ್ ಎನ್'(2018), 'ಏನಿದು ಪೌರತ್ವ ಕಾಯಿದೆ]? (2019), 'ದುಪ್ಪಟ್ಟು'(2020), ಕರಿಡಬ್ಬಿ(2022)

ಪುರಸ್ಕಾರಗಳು: ಅಮ್ಮ ಪ್ರಶಸ್ತಿ(2017), ಶಿವರಾಮ ಕಾರಂತ ಪುರಸ್ಕಾರ-2019 (2020).

ರಾಜಾರಾಂ ತಲ್ಲೂರು

BY THE AUTHOR