About the Author

ರಾಜೇಶ್ವರೀ ಕುಮಾರ್ ರಾವ್ ಅವರು ಮೂಲತ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದವರು. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಲ್ಲಡ್ಕ, ಪಾಣೆಮಂಗಳೂರಿನಲ್ಲಿ, ಪದವಿಪೂರ್ವ ವಿದ್ಯಾಭ್ಯಾಸವನ್ನು ವಿಟ್ಲದಲ್ಲಿ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಎ. ಪದವಿ, ಬಿ.ಎಡ್. ಹಾಗೂ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು ನೂರಾರು ಕಥೆಗಳನ್ನು ಬರೆದಿದ್ದು, ಒಂದಷ್ಟು ಕಥೆಗಳು ಈಗಾಗಲೇ ಹಲವಾರು ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ರಾಜೇಶ್ವರೀ ಕುಮಾರ್ ರಾವ್