About the Author

ವಿಮರ್ಶಕ-ಲೇಖಕ ರಾಮಲಿಂಗಪ್ಪ ಟಿ. ಬೇಗೂರು ಅವರು ಮೂಲತಃ ನೆಲಮಂಗಲ ತಾಲ್ಲೂಕಿನ ತೆಪ್ಪದ ಬೇಗೂರು ಗ್ರಾಮದವರು. 1968ರ ಡಿಸೆಂಬರ್ 29ರಂದು ಜನಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದಿಂದ ಆರು ಚಿನ್ನದ ಪದಕಗಳೊಂದಿಗೆ ಪ್ರಥಮ ರಾಂಕ್‌ನಲ್ಲಿ ಕನ್ನಡ ಎಂ.ಎ. ಪದವಿ. ಬೆಂಗಳೂರು, ಚಳ್ಳಕೆರೆ, ಕುಕನೂರು, ಕೋಲಾರ, ಚಿಂತಾಮಣಿಗಳಲ್ಲಿ ಕನ್ನಡ ಅಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸದ್ಯ ಕೆಂಗೇರಿ ಪದವಿ ಕಾಲೇಜಿನಲ್ಲಿ ಸಹಪ್ರಾಧ್ಯಾಪಕರಾಗಿದ್ದಾರೆ.

ಕನ್ನಡ ಕಾವ್ಯ, ವಿಚಾರಸಾಹಿತ್ಯ, ಸಂಶೋಧನೆ, ವಿಮರ್ಶೆಗಳಲ್ಲಿ ಪರಿಶ್ರಮ ಇರುವ ಇವರಿಗೆ ಜಿ.ಎಸ್.ಎಸ್. ಕಾವ್ಯಪ್ರಶಸ್ತಿ ಲಭಿಸಿದೆ. ’ಮಾಯಾಪಾತಾಳ’,’ಸಂಕರಬಂಡಿ’, ಮಾರ್ಗಾಂತರ, ಪರಕಾಯ, ಎಡ್ವರ್ಡ್ ಸೈದ್, ಅಲ್ಲಮಪ್ರಭು : ಆಧುನಿಕ ಪೂರ್ವ ಅನುಸಂಧಾನಗಳು ಮೊದಲಾದವು ಪ್ರಕಟಿತ ಕೃತಿ ಗಳು.

ನೆಲಮಂಗಲ ತಾಲ್ಲೂಕು 6ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವಕ್ಕೆ ಭಾಜನರು. ಕನ್ನಡ ವಿಶ್ವವಿದ್ಯಾ ಲಯದಿಂದ ’ಕನ್ನಡ ವಿಮರ್ಶೆಯ ವಿನ್ಯಾಸ ಮತ್ತು ತಾತ್ವಿಕತೆ' ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಗಳಿಸಿರುವ ಅವರು ನವಕರ್ನಾಟಕ ಪ್ರಕಟಿಸುತ್ತಿರುವ 'ಹೊಸತು' ಪತ್ರಿಕೆಯ ಸಹಸಂಪಾದಕರಾಗಿದ್ದಾರೆ.

ರಾಮಲಿಂಗಪ್ಪ ಟಿ. ಬೇಗೂರು

(29 Dec 1968)

BY THE AUTHOR