ರವಿ ರಾಯಚೂರಕರ್ ಅವರು ಮೂಲತಃ ರಾಯಚೂರು ಜಿಲ್ಲೆ, ದೇವದುರ್ಗ ತಾಲೂಕಿನವರು. ಎಂ.ಎ.ಪದವೀದರರಾಗಿರುವ ಅವರು ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಬೆಂಗಳೂರು ವಿವಿ ಕನ್ನಡ ಸಂಘದ 99ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಲ್ಲದೇ ರಾಯಚೂರು ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ ಹಾಗೂ ದಲಿತ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಕನ್ನಡ ಮತ್ತು ಜಾನಪದದ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಚೊಚ್ಚಲ ಕವನಸಂಕಲನ " ಬಸವನ ಕಾಲಿನ ಜೋಡಿಮೆಟ್ಟು " ಪ್ರಕಟವಾಗಿದೆ. ಸಾಹಿತ್ಯ ಕ್ಷೇತ್ರದ ಕಾರ್ಯಗಳಿಗಾಗಿ ಬೆಂಗಳೂರು ನಗರ ಜಿಲ್ಲೆಯ ಸಾಹಿತ್ಯ ಪರಿಷತ್ತಿನ ಕನ್ನಡ ಸೇವಾರತ್ನ ಪ್ರಶಸ್ತಿ, ಕರುನಾಡ ಸೇವಾ ಟ್ರಸ್ಟ್ ನೀಡುವ ಪ್ರಜಾರತ್ನ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ.