ಲೇಖಕಿ, ಪತ್ರಕರ್ತೆ ರೇಶಾ ಉಳ್ಳಾಲ್ ಮೂಲತಃ ಮಂಗಳೂರಿನವರು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ನಾಡಿನ ಹಲವು ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ.
ಇವರು ಮೈಸೂರು ಮುಕ್ತ ವಿ.ವಿ.ಯಿಂದ ಡಾ. ಜೋಗನ್ ಶಂಕರ್ ಮಾರ್ಗದರ್ಶನದಲ್ಲಿ ತೃತೀಯ ಲಿಂಗಿಗಳ ಬದುಕಿನ ಕುರಿತ ಸಂಶೋಧನೆ ಹಾಗೂ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇದೀಗ ಮಂಗಳೂರಿನ ಸುಯೆಝ್ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ.