ಕರ್ನಾಟಕದ ಆಧುನಿಕ ಇತಿಹಾಸ ರಚನೆಗೆ ಸಂಬಂಧಿಸಿದಂತೆ ಪ್ರಮುಖರಾದ ಎಸ್. ಚಂದ್ರಶೇಖರ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿದ್ದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಅವರು ಸದ್ಯ ನಿವೃತ್ತರಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.