ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸಿರುವ ಎಸ್. ಕೆ. ಉಮೇಶ್ ಅವರು ಮೂಲತಃ ರಾಮನಗರ ಜಿಲ್ಲೆಯ ಸೋರೆಕಾಯಿದೊಡ್ಡಿಯವರು. ಕನಕಪುರದಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿದ ಅವರು ವಕೀಲರಾಗಿ ವೃತ್ತಿ ಆರಂಭಿಸಿದರು. ಆದರೆ ಆನಂತರದಲ್ಲಿ ಅವರೇ ಬಯಸಿದಂತೆ ಸಬ್ ಇನ್ಸ್ ಪೆಕ್ಟರ್ ಹುದ್ದೆ ದೊರೆತು, 31 ವರ್ಷಗಳ ಕಾಲ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಿದ್ದಾರೆ. 1990ರಿಂದ 2020ರವರೆಗೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಕಾರ್ಯಕ್ಕಾಗಿ 2015ರಲ್ಲಿ ರಾಷ್ಟ್ರಪತಿ ಪದಕ, 2020ನೇ ಸಾಲಿನ ಕೇಂದ್ರ ಸರ್ಕಾರದ ಸ್ಪೆಷಲ್ ಆಪರೇಷನ್ ಮೆಡಲ್ ಹಾಗೂ ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಪೊಲೀಸ್ ಇಲಾಖೆಯಲ್ಲಿ ತಮಗೆ ಎದುರಾದ ಸವಾಲುಗಳು ಮತ್ತು ತಮ್ಮ ಅನುಭವಗಳನ್ನು ಐwitness ಎಂಬ ಕೃತಿಯಲ್ಲಿ ದಾಖಲಿಸಿದ್ದು, 2020ರಲ್ಲಿ ಈ ಕೃತಿ ಪ್ರಕಟಗೊಂಡಿದೆ.