ಷ.ಶೆಟ್ಟರ್ ಅವರು ಹುಟ್ಟಿದ್ದು 11 ಡಿಸೆಂಬರ್ 1935 ರಂದು. ಊರು ಬಳ್ಳಾರಿ ಜಿಲ್ಲೆಯ ಹಂಪಸಾಗರ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ಗಳಲ್ಲಿ ಉನ್ನತ ವ್ಯಾಸಂಗ, ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ವಿವಿಧ ವಿಶ್ವವಿದ್ಯಾಲಯದಲ್ಲಿ ಬೋಧನೆ. 1960 -96, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978-95, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ-1996-99, ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ.ಎಸ್.ರಾಧಾಕೃಷ್ಣನ್ ಪ್ರಾಧ್ಯಾಪಕತ್ವ 2002-2010, 2010ರಿಂದ ಇದೇ ಸಂಸ್ಥೆಯಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ. ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದ ದಕ್ಷಿಣ ಭಾರತ ಶಾಖೆಯ ನಿರ್ದೇಶಕತ್ವ 2005-2013.
ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ಕರ್ನಾಟಕ ಇತಿಹಾಸ ಅನುಸಂದಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನ. ಮೆಲ್ಬೋರ್ನ್ (ಆಸ್ಟ್ರೇಲಿಯಾ) ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನ, ಬಳ್ಳಾರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಹಾಗೂ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತ್ವ. ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ. ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರತ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳ ಸಂದಿವೆ. ಸದ್ಯ ಬೆಂಗಳೂರಿನಲ್ಲಿ ಹಳಗನ್ನಡ ಮತ್ತು ವಚನ ಸಾಹಿತ್ಯದ ಓದು, ಸಂಶೋಧನೆಯಲ್ಲಿ ತೊಡಗಿದ್ದಾರೆ