About the Author

ಸುರೇಂದ್ರನಾಥ್ ಅವರು ಹುಟ್ಟಿದ್ದು ಮೂಡಬಿದರೆಯ ಸಮೀಪದ ಒಂದು ಹಳ್ಳಿಯಲ್ಲಿ. ಓದಿದ್ದು ಬೆಳೆದಿದ್ದು ದಾವಣಗೆರೆಯಲ್ಲಿ. ಓದಿನ ಸಮಯದಲ್ಲೇ ಸಾಹಿತ್ಯ, ನಾಟಕದ ಗೀಳು ಹತ್ತಿಸಿಕೊಂಡ ಅವರು ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ನಾಟಕದ ತರಬೇತಿ ಪಡೆದರು. ಹೊಟ್ಟೆಪಾಡಿಗಾಗಿ ಒಂದಿಷ್ಟು ವರ್ಷಗಳು ಹಲವಾರು ಪತ್ರಿಕೆಗಳಲ್ಲಿ, ಜಾಹೀರಾತು ಕಂಪೆನಿಗಳಲ್ಲಿ ದುಡಿದಿದ್ದಾರೆ. ಬೆಂಗಳೂರಿನ ಸಂಕೇತ್ ತಂಡದಲ್ಲಿ ಸೇರಿ ಹಲವು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಆನಂತರ ಈಟಿವಿ ಸಂಸ್ಥೆಯನ್ನು ಸೇರಿದ ಅವರು ಹದಿಮೂರು ವರ್ಷಗಳ ಕಾಲ ಹೈದರಾಬಾದಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೃತ್ತಿ, ರಂಗಭೂಮಿ ಒಡನಾಟಗಳೊಂದಿಗೆ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿರುವ ಸುರೇಂದ್ರನಾಥ್ ಎರಡು ಕಥಾಸಂಕಲನಗಳು - ಕಟ್ಟು ಕತೆಗಳು, ತಾಪತ್ರಯಗಳು. ಒಂದು ಕಾದಂಬರಿ - ಎನ್ನ ಭವದ ಕೇಡು ರಚಿಸಿದ್ದಾರೆ. ಇದರೊಂದಿಗೆ ತಾವೇ ನಿರ್ದೇಶಿಸುವ ಸಲುವಾಗಿ ಒಂದಷ್ಟು ನಾಟಕಗಳನ್ನೂ ರಚಿಸಿದ್ದಾರೆ.

ಎಸ್. ಸುರೇಂದ್ರನಾಥ್

BY THE AUTHOR