ಬಾಗಲಕೋಟ ಜಿಲ್ಲೆಯ ಹುನಗುಂದದಲ್ಲಿ ಜನಿಸಿದ ಸದಾಶಿವ ಮರ್ಜಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆರಂಭದಲ್ಲಿ ನವನಾಡು ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕೆಲ ಕಾಲ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಕವಿವಿಯಲ್ಲಿ ರೀಡರ್ ಆಗಿ ಕೆಲಸ ಮಾಡಿರುವ ಅವರು 1997ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ 'ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಂಷ ನಿರ್ದೇಶಕರಾಗಿ ನೇಮಕವಾದರು. ಈಗ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, 'ಮಹಾತ್ಮ ಜ್ಯೋತಿ ಬಾಫುಲೆ- ಸಾಮಾಜಿಕ ಚಳುವಳಿಯ ಪಿತಾಮಹ', 'ದಲಿತರ ಮೇಲಿನ ದೌರ್ಜಗಳು ಅವರ ಪ್ರಕಟಿತ ಕೃತಿಗಳಾಗಿವೆ. ಅವರ ಸಂಶೋಧನಾ ಲೇಖನಗಳು ಕನ್ನಡದ ಮುಖ್ಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. `ರಾಷ್ಟ್ರೀಯ ವಯಸ್ಕರ ಶಿಕ್ಷಣ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುವಾಗ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಎನ್.ಎಫ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರಶಸ್ತಿ ದೊರೆತಿದೆ.