About the Author

ಲೇಖಕ ಸಂಪಿಗೆ ನಾಗರಾಜ ಅವರು ಮೂಲತಃ ಬಳ್ಳಾರಿ ತಾಲ್ಲೂಕಿನ ದಾಸರ ನಾಗೇನಹಳ್ಳಿಯವರು. ಬಾಲ್ಯದಿಂದಲೇ ಸಾಹಿತ್ಯದ ಅಭಿರುಚಿಯನ್ನು ಮೈಗೂಡಿಸಿಕೊಂಡವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಹುಟ್ಟೂರಿನಲ್ಲೇ ಪೂರ್ಣಗೊಳಿಸಿ, ನಂತರ ಪದವಿ ಶಿಕ್ಷಣವನ್ನು ಬಳ್ಳಾರಿಯಲ್ಲಿ, . ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿಯನ್ನು ಪಡೆದಿದ್ದಾರೆ. 

`ಖಾಲಿ ಕಣ್ಣಿನ ನಾನು' (ಕತಾ ಸಂಕಲನ), 20ನೇ ಶತಮಾನದ ಕೊನೆಯ ದಶಕಗಳಲ್ಲಿ ಸಂಸ್ಕೃತಿ ಪ್ರಶ್ನೆ (ಸಣ್ಣಕತೆಗಳನ್ನು ಆಧರಿಸಿ) ಸಂಶೋಧನಾ ಕೃತಿಗಳು ಕೂಡ ಬೆಳಕು ಕಂಡಿವೆ.  
ಸದ್ಯ ಬಳ್ಳಾರಿಯ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ವೇದಾವತಿ ತೀರದಲ್ಲಿ’ ಅವರ ಇತ್ತಿಚಿನ ಕಾದಂಬರಿ. 

ಸಂಪಿಗೆ ನಾಗರಾಜ