ಸತೀಶ ಹೆಚ್. ಆರ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚೌಳಹಿರಿಯೂರು ಗ್ರಾಮದವರು. ತರೀಕೆರೆಯಲ್ಲಿ ವಾಸವಿದ್ದಾರೆ. ಆದರೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕರೆಕಲ್ ಕ್ಯಾಂಪ್ ನಲ್ಲಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಾಗಿದ್ದಾರೆ. ಕನ್ನಡ ವಿಶ್ವವಿದ್ಯಾಲಯದಿಂದ ಎಂಎ ಕನ್ನಡ, ಕುವೆಂಪು ವಿಶ್ವ ವಿದ್ಯಾಲಯದಿಂದ ಬಿಎಡ್ ಪದವೀಧರರು. ರಾಜ್ಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ನಲಿಕಲಿ ಹಾಗೂ ಇತರ ವಿಷಯಗಳಲ್ಲಿ ತರಬೇತಿ ಪಡೆದು ತಾಲೂಕು, ಜಿಲ್ಲಾ, ಹಾಗೂ ವಿಭಾಗ ಮಟ್ಟದ ಶಿಕ್ಷಕರಿಗೆ, ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಿರುತ್ತಾರೆ. ಅವರ ಕತೆ, ಕವಿತೆ, ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.