ಯಕ್ಷಗಾನ ಕಲಾವಿದ, ಲೇಖಕ ಸೇರಾಜೆ ನಾರಾಯಣ ಭಟ್ಟ ಅವರು ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು, ಕರೋಪಾಡಿ ಗ್ರಾಮದ ಸೇರಾಜೆಯಲ್ಲಿ ಜನಿಸಿದರು. ‘ಇತಿಹಾಸ’ದಲ್ಲಿ ಸ್ನಾತಕೋತ್ತರ ಪದವೀಧರರು. ಉಡುಪಿಯ ಎಂ.ಜಿ.ಎಂ. ಕಾಲೇಜು ಮತ್ತು ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದಾರೆ.
ಹವ್ಯಾಸಿ ಯಕ್ಷಗಾನ ವೇಷಧಾರಿ ಮತ್ತು ತಾಳಮದ್ದಳೆ ಅರ್ಥಧಾರಿ. ಹಲವಾರು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕರಾಗಿದ್ದರು. ಕರ್ನಾಟಕ ಸಾಂಸ್ಕೃತಿಕ ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿರುವ ಅವರು ಜಿಲ್ಲಾ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕರಾಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಯಕ್ಷಗಾನ ಸಮ್ಮೇಳನವು ಸನ್ಮಾನಿಸಿ ಗೌರವಿಸಿವೆ.