ಷಣ್ಮುಗಯ್ಯ ಅಕ್ಕೂರಮಠ ಅವರು ಗದಗ ಜಿಲ್ಲೆ, ಶಿರಹಟ್ಟಿ ತಾಲ್ಲೂಕು, ಬೂದಿಹಾಳ ಗ್ರಾಮದಲ್ಲಿ 1939 ಆಗಸ್ಟ್ 23ರಂದು ಜನಿಸಿದರು. ತಂದೆ ವೀರಪ್ಪಯ್ಯ ಶಾಸ್ತ್ರಿ ಅಕ್ಕೂರಮಠ, ತಾಯಿ ಬಸವಲಿಂಗಾಂಬೆ. ಸಂಸ್ಕೃತದಲ್ಲಿ ಅಪಾರ ಆಸಕ್ತಿ ತಳೆದಿದ್ದರು. ಸಂಸ್ಕೃತ ಸಾಹಿತ್ಯ, ಕಾವ್ಯ, ಚಂಪೂಕಾವ್ಯ, ನಾಟಕಗಳು, ಛಂದಸ್ಸು, ವ್ಯಾಕರಣ, ತರ್ಕ ಮೊದಲಾದ ವಿಷಯಗಳ ಅಧ್ಯಯನ ಮಾಡಿದರು. ಸ್ನಾತಕೋತ್ತರ ಪದವೀಧರರು. 1970ರಲ್ಲಿ ಪ್ರಯಾಗ ವಿಶ್ವವಿದ್ಯಾನಿಲಯದ (ಉತ್ತರ ಪ್ರದೇಶ)ದಿಂದ ಸಾಹಿತ್ಯರತ್ನವನ್ನೂ ಪಡೆದರು. 1983ರಲ್ಲಿ ಮೈಸೂರು ರೀಜನಲ್ ಕಾಲೇಜ್ ಆಫ್ ಎಜುಕೇಷನ್ ಸಂಸ್ಥೆಯಿಂದ ಬಿ.ಎಡ್., ಪದವೀಧರರು. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದರು.
ಆರೂಢ ಸಂಪ್ರದಾಯದ ಸದ್ಗುರು ಬಾಬಾ ಪ್ರಶಸ್ತಿ, ಶಿವಕಮಲ ಸಾಹಿತ್ಯ ಪ್ರಶಸ್ತಿ, ಶ್ರೀಮತಿ ಶಾಂತ ಶ್ರೀ ಬಿ.ವಿ. ಗೌಡ ಫೌಂಡೇಶನ್‍ನಿಂದ ಪಂಚಾಚಾರ್ಯ ಪ್ರಶಸ್ತಿ, ಶಿವಲಿಂಗ ಪ್ರಶಸ್ತಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಶಕುಂತಳ ಜಯದೇವ ಶರಣ ಪ್ರಶಸ್ತಿ, ಕಾಶಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಜ್ಞಾನ ಸಿಂಹಾಸನದಿಂದ `ಸಾಹಿತ್ಯ ವಿಶಾರದ' ಹಾಗೂ `ಆರ್ಯಭಟ' ಪ್ರಶಸ್ತಿಗಳು ಸಂದಿವೆ.