ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು ರಚಿಸಿದ್ದಾರೆ.
ತಕಧಿಮಿಕಾ, ಮುಂಗಾರಿನ ಕನಸು ಕಾರ್ತೀಕ ದೀಪ, ಬದುಕು, ಮದರಂಗಿ ಮುಂತಾದ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ 'ಅತ್ಯುತ್ತಮ ಸಿನಿಮಾ ಪತ್ರಕರ್ಕ' ಪ್ರಶಸ್ತಿ, 'ಗೌರಿ ಲಾಮಯ್ಯ ದತ್ತಿ' ಪ್ರಶಸ್ತಿ, 'ಪುಟ್ಟರಾಜ ಗವಾಯಿ ಕಾವ್ಯ' ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.