ಕವಿ ಡಾ.ಶಾಂತಲಿಂಗ ಘಂಟೆ ಅವರು ಮೂಲತಃ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಗಡಿ ಗ್ರಾಮ ದರ್ಗಾ ಶಿರೂರನವರು. ತಂದೆ ಹಣಮಂತರಾಯ, ತಾಯಿ ಪುತಳಾಬಾಯಿ. ಸ್ವಗ್ರಾಮದಲ್ಲಿ ಪ್ರಾಥಮಿಕ-ಪ್ರೌಢ ಶಿಕ್ಷಣ ಪೂರೈಸಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಎಂ.ಎ ಹಾಗೂ ಪಿಎಚ್ ಡಿ ಪದವಿ ಪಡೆದರು. ಸದ್ಯ, ಕಲಬುರಗಿಯ ಗೋದುತಾಯಿ ಮಹಿಳಾ ಪದವಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರು.